Contact For Add

ಅಟಲ್‍ಜೀ ಜನಸ್ನೇಹಿ ಕೇಂದ್ರ: ಹಾವೇರಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

 ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್

ಹಾವೇರಿ:ಮಾ.06: ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ವಿವಿಧ ಪ್ರಮಾಣಪತ್ರಗಳ ಸೇವೆಯನ್ನು ಅವಧಿಗಿಂತ ಮುಂಚೆ ವಿಲೇವಾರಿ ಮಾಡಿ ಹಾವೇರಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ.
ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ವಿವಿಧ ಪ್ರಮಾಣಪತ್ರಗಳ ಸೇವೆಯನ್ನು ನೀಡಲು ಹಾವೇರಿ ಜಿಲ್ಲೆಯ ನಾಡಕಚೇರಿಗಳಲ್ಲಿ ಫೆಬ್ರುವರಿ ತಿಂಗಳಲ್ಲಿ ಸ್ವೀಕರಿಸಲಾಗಿರುವ 22,909 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೆ ಶೆ.99.77ರಷ್ಟು ವಿಲೇಮಾಡಿ 5.34 ಸಿಗ್ಮಾ ಮೌಲ್ಯವನ್ನು ಪಡೆದಿದೆ.
10.45 ವಿಲೇವಾರಿ ಸೂಚ್ಯಂಕದ ಪ್ರಕಾರ ತಮ್ಮ ಜಿಲ್ಲೆಯಲ್ಲಿ 11.54 ಪಟ್ಟು ನಿಗದಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಫೆಬ್ರುವರಿ ತಿಂಗಳಲ್ಲಿ ಹಾವೇರಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಪಡೆದಿರುವುದು ಶ್ಲಾಘನೀಯ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಈ ಕಾರ್ಯಸಾಧನೆಗೆ ಜಿಲ್ಲಾಧಿಕಾರಿ ಹಾಗೂ ನಾಡಕಚೇರಿ, ಅಟಲ್‍ಜೀ ಜನಸ್ನೇಹಿ ಕೇಂದ್ರದ ಅಧಿಕಾರಿ, ಸಿಬ್ಬಂದಿ ಸಹಕಾರ, ಕಾರ್ಯತತ್ಪರತೆ ಕಾರಣವಾಗಿದೆ ಎಂದು ಭೂಮಾಪನಾ ಇಲಾಖೆ ಆಯುಕ್ತ ಮುನೀಸ್ ಮೌದ್ಗಿಲ್ ಅವರು ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರಿಗೆ ಪ್ರಶಂಸನೀಯವಾಗಿ ಪತ್ರಬರೆದು ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮಿಂದ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಅವರು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಅಟಲ್‍ಜೀ ಜನಸ್ನೇಹಿ ಕೇಂದ್ರ: ಹಾವೇರಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಅಟಲ್‍ಜೀ ಜನಸ್ನೇಹಿ ಕೇಂದ್ರ: ಹಾವೇರಿ ಜಿಲ್ಲೆ ರಾಜ್ಯಕ್ಕೆ ಪ್ರಥಮ Reviewed by MediaMind24x7 Team on March 06, 2018 Rating: 5

No comments:

Powered by Blogger.