ಜಾಹೀರಾತು ಪ್ರಸಾರಕ್ಕೆ ಮಾಧ್ಯಮ ಪ್ರಮಾಣೀಕರಣ ಕಡ್ಡಾಯ
ಜಾಹೀರಾತು ಪ್ರಸಾರಕ್ಕೆ ಮಾಧ್ಯಮ ಪ್ರಮಾಣೀಕರಣ ಕಡ್ಡಾಯ -ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ
ಧಾರವಾಡ (ಕರ್ನಾಟಕ ವಾರ್ತೆ) ಏ.೧೧; ರಾಜಕೀಯ ಪ್ರಚಾರದ ಪತ್ರಿಕಾ ಜಾಹೀರಾತು, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹೀರಾತು ಹಾಗೂ ಸಾಮಾಜಿಕ ಜಾಲತಾಣಗಳು, ಮೊಬೈಲ್ ಎಸ್.ಎಂ.ಎಸ್., ಇ-ಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳಿಗೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಕೇಬಲ್ ಟಿವಿ ಪ್ರಸಾರಕರು,ಮೊಬೈಲ್ ನೆಟ್‌ವರ್ಕ ಹಾಗೂ ಬಲ್ಕ್ ಎಸ್.ಎಂ.ಎಸ್.ಪೂರೈಕೆದಾರರಿಗೆ ಮಾಧ್ಯಮ ಪ್ರಮಾಣೀಕರಣದ ಕುರಿತು ಅರಿವು ಮೂಡಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾಹೀರಾತುಗಳಿಗೆ ಕಡ್ಡಾಯವಾಗಿ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳು ನಿಗದಿತ ನಮೂನೆ-ಎ ದಲ್ಲಿ ಅರ್ಜಿ ಸಲ್ಲಿಸಿ, ನಮೂನೆ -ಬಿ ಯಲ್ಲಿ ಅನುಮತಿ ಪಡೆಯಬೇಕು. ಜಾಹೀರಾತಿನ ವೆಚ್ಚವನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಜಾಹೀರಾತು ಅನುಮತಿ ಹಾಗೂ ಪಾವತಿ ಸುದ್ದಿಯ ಮೇಲೆ ನಿಗಾವಹಿಸಲು ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ.ಪಾವತಿ ಸುದ್ದಿ ಪ್ರಕಟಿಸುವುದು ಪ್ರಜಾ ಪ್ರಾತಿನಿಧಿಕ ಕಾಯ್ದೆ ೧೯೫೧ರಡಿ ಶಿಕ್ಷಾರ್ಹ ಅಪರಾಧವಾಗಿದೆ. ಪಾವತಿ ಸುದ್ದಿಯು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಪಾಯಕಾರಿಯಾಗಿದೆ. ಪಾವತಿ ಸುದ್ದಿ ಕುರಿತಂತೆ ಈಗಾಗಲೇ ಪ್ರೆಸ್‌ಕೌನ್ಸಿಲ್ ಆಫ್ ಇಂಡಿಯಾ, ಮಾಧ್ಯಮ ಸಂಸ್ಥೆಗಳು ಹಾಗೂ ಸುಪ್ರಿಂ ಕೋರ್ಟ ಗಂಭೀರವಾಗಿ ಪರಿಗಣಿಸಿ ಪಾವತಿ ಸುದ್ದಿ ಎಂದರೆ ಚುನಾವಣೆಗೆ ಸಂಬಂಧಿಸಿದಂತೆ ನಗದು ಅಥವಾ ಯಾವುದೇ ಉಡುಗೊರೆ ರೂಪದಲ್ಲಿ ಪಡೆದುಕೊಂಡು ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಂಬಂಧಿಸಿದ ಸುದ್ದಿ ಅಥವಾ ವಿಶ್ಲೇಷಣೆ ಮಾಧ್ಯಮದಲ್ಲಿ (ಮುದ್ರಣ ಹಾಗೂ ವಿದ್ಯುನ್ಮಾನ) ಪ್ರಕಟವಾಗಿದ್ದಲ್ಲಿ ಅದನ್ನು ಪಾವತಿ ಸುದ್ದಿ ಎಂದು ಪರಿಗಣಿಸಲಾಗುವುದು.
ಪಾವತಿ ಸುದ್ದಿ ಪ್ರಕಟವಾದರೆ ಪರಿಶೀಲಿಸಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೧ರನ್ವಯ ಪ್ರಕರಣ ದಾಖಲಿಸುವುದಲ್ಲದೇ ಪ್ರಜಾ ಪ್ರಾತಿನಿಧ್ಯ ಕಾಯ್ದೆ-೧೯೫೧ರ ಅಧ್ಯಾಯ-೩ರ ಭಾಗ-೭ರಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಒಳಪಡಿಸಲು ಅವಕಾಶವಿರುವ ಬಗ್ಗೆ ಸಭೆಯ ಗಮನಕ್ಕೆ ತಂದರು.
ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಾಹೀರಾತು ಪ್ರಮಾಣೀಕರಿಸಲು ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿಯನ್ನು ರಚಿಸಲಾಗಿದೆ. ಎಲ್ಲ ಪತ್ರಿಕಾ, ದೃಶ್ಯ ಮಾಧ್ಯಮ ಹಾಗೂ ಸ್ಥಳೀಯ ಕೇಬಲ್ ಟಿವಿಗಳಲ್ಲಿ ಪ್ರಸಾರವಾಗುವ ಚುನಾವಣಾ ಜಾಹಿರಾತುಗಳ ಪ್ರಕಟಣೆಗೆ ಮುಂಚಿತವಾಗಿ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ ಅನುಮತಿ ಕಡ್ಡಾಯವಾಗಿರುತ್ತದೆ. ಕೇಬಲ್ ಟಿ.ವಿ., ಸಾಮಾಜಿಕ ಜಾಲತಾಣ, ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಇ-ಪತ್ರಿಕೆಗಳ ಸುದ್ದಿಗಳ ಕುರಿತಂತೆ ನಿಗಾವಹಿಸಲು ತಂಡಗಳನ್ನು ರಚಿಸಲಾಗಿದೆ.
ಚುನಾವಣಾ ಅಭ್ಯರ್ಥಿಯ ಪರ ಅಥವಾ ವಿರುದ್ಧವಾದ ವ್ಯಕ್ತಿತ್ವ ಅಥವಾ ಸಾಧನೆಯ ಸರಿಯಾದ ಚಿತ್ರಣ ಇರದೇ ಮತ ಚಲಾಯಿಸುವುದನ್ನು ನಿರ್ಧರಿಸುವುದು, ಒಬ್ಬ ಅಭ್ಯರ್ಥಿಯ ಸಾಧನೆ ಬಗ್ಗೆ ನಿಗದಿತ ಶಬ್ದಗಳ ಬರಹವನ್ನು ನಿರಂತರವಾಗಿ ಪ್ರಕಟಿಸುವುದು.
ಜಾತಿ , ಧರ್ಮದ ಆಧಾರದ ಮೇಲೆ ಒಬ್ಬ ವ್ಯಕ್ತಿ ಗೆಲುವು ಸಾಧ್ಯತೆ ಎಂದು ಪ್ರತಿಬಿಂಬಿಸುವುದು, ಒಬ್ಬನೇ ಅಭ್ಯರ್ಥಿಯ ಬಗ್ಗೆ ನಿರಂತರವಾಗಿ ಲೇಖನವನ್ನು ಬರೆದು ಪ್ರಕಟಿಸುವುದು, ವರದಿಯ ತಲೆಬರಹದಲ್ಲಿ ನಿರ್ಧಿಷ್ಟ ವ್ಯಕ್ತಿ ಗೆಲುವು ಸಾಧಿಸುತ್ತಾನೆ ಎಂದು ನಮೂದಿಸಿ ಒಳಗಿನ ಸುದ್ದಿಯಲ್ಲಿ ಕಾರಣ ಇಲ್ಲದೆ ಇರುವುದು ಇವೆಲ್ಲವೂ ಪಾವತಿಯ ಸುದ್ದಿಯ ವ್ಯಾಪ್ತಿಗೆ ಒಳಪಡುತ್ತವೆ.
ಪಾವತಿ ಸುದ್ದಿ ಪರಿಗಣಿಸಿ ಪ್ರಕಟವಾದ ೯೬ ಗಂಟೆಯೊಳಗೆ ಸಂಬಂಧಿಸಿದ ಪಕ್ಷ ಅಥವಾ ಅಭ್ಯರ್ಥಿಗಳಿಗೆ ಸ್ಪಷ್ಟೀಕರಣ ಕೇಳಿ ನೋಟೀಸ್ ನೀಡಲಾಗುವುದು. ಅಭ್ಯರ್ಥಿಗಳು ೪೮ ಗಂಟೆಯೊಳಗೆ ನೋಟೀಸ್‌ಗೆ ಉತ್ತರಿಸಬೇಕಾಗುತ್ತದೆ ಎಂದು ತಿಳಿಸಿದರು.
ಚುನಾವಣೆ ವೆಚ್ಚ ವಿಭಾಗದ ನೋಡಲ್ ಅಧಿಕಾರಿ ,ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ಎಸ್.ಉದಯಶಂಕರ್ ಮಾತನಾಡಿ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯು ತನ್ನ ಚುನಾವಣಾ ಖರ್ಚು ವೆಚ್ಚದಲ್ಲಿ ಜಾಹೀರಾತಿನ ಮೊತ್ತವನ್ನು ತೋರಿಸದೇ ಇರುವುದು ಭಾರತ ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆ-೧೯೫೧ರ ಪ್ರಕಾರ ಜಾರಿ ಮಾಡಿದ ಚುನಾವಣಾ ಕಾಯ್ದೆ-೧೯೬೧ ಉಲ್ಲಂಘನೆ ಮಾಡುವುದು ಹಾಗೂ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮದವರು ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯಿಂದ ಹಣ ಪಡೆದುಕೊಂಡು ತಮ್ಮ ಅಧಿಕೃತ ವೆಚ್ಚ ಪತ್ರಿಕೆಯಲ್ಲಿ ( Sಣಚಿಣemeಟಿಣ oಜಿ ಂಛಿಛಿouಟಿಣs) ತೋರಿಸದೇ ಕಂಪನಿ ಕಾಯ್ದೆ-೧೯೫೬ ಮತ್ತು ಆದಾಯ ತೆರಿಗೆ ಕಾಯ್ದೆ-೧೯೬೧ ಮತ್ತು ಸಂಬಂಧಿತ ಕಾಯ್ದೆಗಳನ್ನು ಉಲ್ಲಂಘನೆಯಾಗುತ್ತದೆ ಎಂದರು.
ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶಕುಮಾರ್ ಮಾತನಾಡಿ,ಫೇಸ್‌ಬುಕ್,ವಾಟ್ಸ್ಪ್, ಟ್ವಿಟರ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆ ಮತ್ತು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವುದಕ್ಕಿಂತ ಮುಂಚೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ ವತಿಯಿಂದ ಮಾಧ್ಯಮ ಪ್ರಮಾಣೀಕರಣ ಪತ್ರ ಪಡೆಯುವುದು ಕಡ್ಡಾಯ; ಒಂದು ವೇಳೆ ಅದನ್ನು ಉಲ್ಲಂಘಿಸಿ ಪ್ರಚಾರ ಮಾಡಿದರೇ ಚುನಾವಣಾ ನೀತಿ ಸಂಹಿತೆ ಮತ್ತು ಐಟಿ ಕಾಯ್ದೆ ಉಲ್ಲಂಘನೆ ಅಡಿ ಸಂಬಂಧಿಸಿದವರ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು .ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಅರ್ಜಿ ನಮೂನೆ-೨೬ ಅಡಿ ತಮ್ಮ ಸಾಮಾಜಿಕ ಜಾಲತಾಣಗಳ ಅಕೌಂಟ್ ಮಾಹಿತಿ ನಮೂದಿಸಬೇಕು. ಪಕ್ಷಗಳು ಸಹ ತಮ್ಮ ಅಕೌಂಟ್ ನಂಬರ್‌ಗಳ ಮಾಹಿತಿ ಒದಗಿಸಬೇಕು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಪೋಸ್ಟ್ ಮಾಡುವುದಕ್ಕಿಂತ ಮುಂಚೆ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ (ಎಂಸಿಎಂಸಿ)ಗೆ ಪೋಸ್ಟ್ ಮಾಡುವ ವಿನ್ಯಾಸವುಳ್ಳ ಅಂಶ, ಅದಕ್ಕೆ ತಗುಲಿದ ಹಾಗೂ ತಗಲುವ ವೆಚ್ಚ ಸೇರಿದಂತೆ ಇನ್ನಿತರ ಅಂಶಗಳನ್ನು ಸಲ್ಲಿಸಬೇಕು. ಅದನ್ನು ಸಮಿತಿ ಪರಿಶೀಲಿಸಿ ಸಂಖ್ಯೆಯೊಂದನ್ನು ನೀಡಿ ಪ್ರಮಾಣೀಕರಣ ಪ್ರಮಾಣಪತ್ರ ನೀಡಲಿದೆ. ಅದನ್ನು ಮಾತ್ರ ಪ್ರಚಾರ ಮಾಡಬೇಕು. ಅದನ್ನು ಬಿಟ್ಟು ಯಾವುದೇ ಕಾರಣಕ್ಕೂ ಅನುಮತಿ ಪಡೆಯದೇ ಹಾಗೆಯೇ ಪ್ರಚಾರ ಮಾಡಿದ್ದಲ್ಲಿ ಗ್ರೂಪ್ ಅಡ್ಮಿನ್, ಶೇರ್ ಮಾಡಿದವರು ಹಾಗೂ ಅಭ್ಯರ್ಥಿಗಳ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿ ಕ್ರಮಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಪ್ರಚಾರ ನಡೆಸುವುದನ್ನು ಎಂಸಿಎಂಸಿ ಪರಿಶೀಲನೆ ನಡೆಸಲಿದೆ. ಇದಕ್ಕೆ ಸಂಬಂಧಿಸಿದ ದೂರುಗಳನ್ನು ಜಿಲ್ಲಾ ದೂರು ನಿರ್ವಹಣಾ ಕೋಶಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ರಮೇಶ ಕಳಸದ,ಎಂ.ಸಿ.ಎಂ.ಸಿ.ನೋಡಲ್ ಅಧಿಕಾರಿಯಾಗಿರುವ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಜಿಲ್ಲಾ ಎನ್.ಐ.ಸಿ.ಅಧಿಕಾರಿ ಮೀನಾಕುಮಾರಿ, ಆಕಾಶವಾಣಿಯ ಸತೀಶ ಪರ್ವತೀಕರ್,ಗಿರೀಶ ಪಾಟೀಲ, ಡಿವೈಎಸ್‌ಪಿ ಬಾಲಚಂದ್ರ ಬಿ.ಎಸ್.ಪ್ರೊಬೆಷನರಿ ಎಸಿಗಳಾದ ಪಾರ್ವತಿ,ಶೇಖರ್,ಡಾ.ಸಂಜಯ್ ಮಾಲಗಿತ್ತಿ, ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Reviewed by MediaMind24x7 Team
on
April 12, 2018
Rating:
Reviewed by MediaMind24x7 Team
on
April 12, 2018
Rating:

No comments: